ಜೇವರ್ಗಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ 1 ಪ್ರವರ್ಗ 2 ಬಿ 3ಎ ಹಾಗೂ 3ಬಿ ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23, ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಸಿಇಟಿ ಕೌನ್ಸಲಿಂಗ್ ಮಾದರಿಯಲ್ಲಿ ಅವಕಾಶ ಕಲ್ಪಿಸಲು ಆದೇಶ ನೀಡಲಾಗಿದೆ ಎಂದು ಜೇವರ್ಗಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಪ್ರವೇಶ ಪಡೆದು 5ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅಪ್ಲಿಕೇಶನ್ ಪ್ರಿಂಟ್ ತೆಗೆದು ವಸತಿ ನಿಲಯದ ಮೇಲ್ವಿಚಾರಕರಿಗೆ ಸಲ್ಲಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ