ಮುಂಡಗೋಡ : ತಾಲ್ಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಸ್ಥಾನದ ಬಾಗಿಲು ಬೀಗ ಮುರಿದು ದೇವಿಯ ಕೊರಳಲ್ಲಿರುವ ಸುಮಾರು 40 ಗ್ರಾಮ ಚಿನ್ನಾಭರಣ ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಲಭ್ಯ ವಾಗಿದೆ.
ಮಂಗಳವಾರ ಸಂಜೆ ಕಳ್ಳತನ ನಡೆದಿರಬಹುದು ಎಂದೂ ಶಂಕಿಸಲಾಗಿದೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ದಾವಿಸಿದ್ದಾರೆ.