ಹೆಗ್ಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮುದಿಗೆರೆ ಗ್ರಾಮದ ಶ್ರೀ ಭ್ರಮರಂಬ ಸಮೇತ ಸೋಮೇಶ್ವರ ಸ್ವಾಮಿಯವರ ಪುನರ್ ಪ್ರತಿಷ್ಠಾಪನೆ ಮತ್ತು ವಿಮಾನ ಗೋಪುರ ಕಲಶ ಸ್ಥಾಪನ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಪೂಜ್ಯ ಗುರುಗಳಾದ ಶ್ರೀ ಮಹಾ ನಿರಂಜನ ಪ್ರಣವ ಸ್ವರೂಪಿ ಕಾರದ ವೀರಬಸವ ಮಹಾಸ್ವಾಮಿಗಳು, ಶ್ರೀ ಸಂಜಯ್ ಕುಮಾರ ಮಹಾಸ್ವಾಮಿಗಳು ಹಾಗೂ ಶ್ರೀ ಸೋಮಶೇಖರ ಸ್ವಾಮೀಜಿರವರ ದಿವ್ಯ ಸಾನಿಧ್ಯದಲ್ಲಿ, ಹಾಗೂ ಜನಪ್ರಿಯ ಶಾಸಕರಾದ ಡಿಸಿ ಗೌರಿಶಂಕರ್ ರವರ ಅಧ್ಯಕ್ಷತೆಯಲ್ಲಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಕಾರ್ಯಕ್ರಮವು ಅದ್ದೂರಿಯಾಗಿ ನೆರವೇರಿತು,
ಈ ಸಂದರ್ಭದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಡಿಸಿ ಗೌರಿಶಂಕರ್ ಅವರು ಮಾತನಾಡಿ ಮುದಿಗೆರೆ ಗ್ರಾಮಕ್ಕೆ ಸಿಸಿ ರಸ್ತೆಗಳು ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿ ಕೊಡುವುದಾಗಿ ಭರವಸೆ ನೀಡಿ, ದೇವಾಲಯದ ಅಭಿವೃದ್ಧಿ ಕಾರ್ಯಕ್ಕೆ ವೈಯಕ್ತಿಕವಾಗಿ 2,00,000 ಲಕ್ಷ ರೂಗಳ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಹಾಲನೂರು ಅನಂತ್ ಕುಮಾರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಾದ ಆಜಾಮ್ ಪಾಷ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪ್ರದೀಪ್, ಜಯಣ್ಣ, ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರು ಸದಸ್ಯರುಗಳು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು,