94 total views
ಕೋಲ್ಹಾರ : ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಆಗಿರುವ ಪರಿಣಾಮ ಬಿಜೆಪಿ ಮುಖಂಡ ಗಾಯಗೊಂಡಿರುವ ಘಟನೆ ತಾಲೂಕಿನ ಮಟ್ಟಿಹಾಳ ಕ್ರಾಸ್ ಯುಕೆಪಿ ಮಧ್ಯೆ ಬನ್ನಿ ಹಳ್ಳದ ಹತ್ತಿರ ಬೆಳ್ಳಂಬೆಳಗ್ಗೆ ಶುಕ್ರವಾರ ಈ ಘಟನೆ ಸಂಭವಿಸಿದೆ. ಬಿಜೆಪಿ ಮುಖಂಡ ಅಪ್ಪುಗೌಡ ಪಾಟೀಲ (ಮನಗೂಳಿ) ಸಣ್ಣಪುಟ್ಟ ಗಾಯಗಳಾಗಿವೆ,ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅತಿವೇಗದ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಾಳು ಅಪ್ಪುಗೌಡ ಪಾಟೀಲ ಅವರನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ವರದಿ: ಕಾಂತು ಹಡಪದ