88 total views
ಮೈಸೂರು: ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕಿ ಬಿ. ಮಾಲತಿ ಕರೆ ನೀಡಿದರು.
ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರು ವತಿಯಿಂದ ಮೈಸೂರು ಜಿಲ್ಲಾ ವಸತಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಹಾಗೂ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪ್ರಥಮ ಬಾರಿಗೆ ಕ್ರೀಡಾಸ್ಪರ್ಧೆಗಳನ್ನು ಆಯೋಜನೆ ಮಾಡಿದ್ದು, ಇದರಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕ್ರಿಯಾಶೀಲರಾಗಿರಲು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಭಾವನೆ ಉಂಟಾಗುತ್ತದೆ.ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಭಾವನೆಯಿಂದ ಸೋಲು ಗೆಲುವುಗಳನ್ನು ಸಮನಾಂತರವಾಗಿ ಸ್ವೀಕರಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದರು.
ಸಮಾರಂಭದಲ್ಲಿ ಮೈಸೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಅಂತರರಾಷ್ಟ್ರೀಯ ಕ್ರೀಡಾಪಟು ಧನುಷಾ, ಜಿಲ್ಲಾ ಸಮನ್ವಯಾಧಿಕಾರಿ ಹೇಮ್ಕುಮಾರ್, ಆನಂದ್, ಗಣೇಶ್, ಗಣಪತಿ ಜಕಾತಿ, ಆಶಾ ಮಹಾಂತೇಶ್ ಮಾಟೋಳಿ, ಪ್ರಾಂಶುಪಾಲರಾದ ರಂಗನಾಥ್, ವಸಂತ ಹಾಜರಿದ್ದರು.