110 total views
ಮೈಸೂರು :-ಮಾನ್ಯ ಮುಖ್ಯಮಂತ್ರಿಗಳು ನವೆಂಬರ್ 28 ರಂದು ನಂಜನಗೂಡು ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಧಾನ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ನುಗು ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಹಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಕಾರ್ಯಕ್ರಮ ನಡೆಯುವ ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಕ್ರಮ ನಡೆಯುವ ಸ್ಧಳದಲ್ಲಿ ಬೇಕಾದ ಸೌಲಭ್ಯಗಳು, ಪೊಲೀಸ್ ಭದ್ರತೆ ಹಾಗೂ ಅಗತ್ಯ ವ್ಯವಸ್ಧೆಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಇದಕ್ಕೆ ಮುನ್ನ ಮಾನ್ಯ ಜಿಲ್ಲಾಧಿಕಾರಿಗಳು ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ನಂಜನಗೂಡು ಭೇಟಿ ಸಂಬAಧ ಪೂರ್ವಭಾವಿ ಸಭೆ ನಡೆಸಿ ಸಾರ್ವಜನಿಕರ ಹಾಗೂ ರೈತರ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ವಿಧಾನ ಸಭಾ ಶಾಸಕರಾದ ಹರ್ಷ ವರ್ಧನ್, ಜಿಲ್ಲಾ ಪೊಲೀಸ್ ವರಿಷ್ಠಾಧಕಾರಿಗಳಾದ ಚೇತನ್, ನಂಜನಗೂಡು ತಹಶೀಲ್ದಾರ್ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರೋತ್ಸಾಹಧನ ಮಂಜೂರು ಆದೇಶ
ಮೈಸೂರು, ನ.23.(ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಕೋವಿಡ್-19ರ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪರೀಕ್ಷೆ ಬರೆಯದೆ ತೆರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಪ್ರೋತ್ಸಾಹಧನವನ್ನು, ಉಳಿದ ಮೆಟ್ರಿಕ್ ನಂತರದ ಕೋಸುಗಳಲ್ಲಿ ವಾರ್ಷಿಕ ಪರೀಕ್ಷೆ ಬರೆದು ಪ್ರಥಮ ದರ್ಜೆ ಪ್ರಥಮ ಪ್ರಯತ್ನದಲ್ಲಿ ತೆರ್ಗಡೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶ ಸಂಖ್ಯೆ:ಸಕಇ174 ಪಕವಿ 2015, 2015 ರ ಆಗಸ್ಟ್ 10 ರನ್ವಯ ಶೇ. 100 ರಷ್ಟು ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಆದೇಶವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಸುದ್ದಿ ಬಿಟ್ಟು ಇತರೆ ಸುದ್ದಿಯ ಅವಶ್ಯಕತೆ ಇರಲಿಲ್ಲ,
ಹಾಗೂ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಕೋವಿಡ್-19ರ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪರೀಕ್ಷೆ ಬರೆಯದೆ ತೆರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಪ್ರೋತ್ಸಾಹಧನವನ್ನುನೀಡುವ ಅಗತ್ಯವಿರಲಿಲ್ಲ..