120 total views
ಮೈಸೂರು:-ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಕಾಲೇಜು ಶಿಕ್ಷಣ ಮಂಡಳಿ ಮೈಸೂರು ರವರ ಸಹಯೋಗದೊಂದಿಗೆ ಮೈಸೂರು ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿಯು ಜನಗಣತಿಯ ಸರಾಸರಿಗಿಂತ ಕಡಿಮೆ ಇರುವುದರಿಂದ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೂ ಎಲ್ಲಾ ಅರ್ಹ ಯುವ ಮತದಾರರನ್ನು ನೋಂದಣಿ ಮಾಡುವ ಸಂಬAಧ 2022ರ ನವೆÀಂಬರ್ 24 ರಂದು ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಲ್ಲಿ ಪ್ರಜಾಪ್ರಭುತ್ವಕ್ಕಾಗಿ -ಒಂದು ಗಂಟೆ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅದರಂತೆ 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯ ಕಲ್ಪಿಸಲಾಗಿದ್ದು ಜನವರಿ 01 ರ ಅರ್ಹತಾ ದಿನಾಂಕದ ಜೊತೆಗೆ 01 ನೇ ಏಪ್ರಿಲ್, 01 ನೇ ಜುಲೈ ಮತ್ತು 01 ನೇ ಅಕ್ಟೋಬರ್‌ನ ದಿನಾಂಕಗಳಿಗೆ ಅರ್ಹರಾಗುವ ಯುವ ಮತದಾರರು ಸಹ ಹೆಸರುಗಳ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.
“ಪ್ರಜಾಪ್ರಭುತ್ವಕ್ಕಾಗಿ-ಒಂದು ಗಂಟೆ” ಎಂಬ ವಿಶೇಷ ಕಾರ್ಯಕ್ರಮದಲ್ಲಿ ಎಲ್ಲಾ ಯುವ ಮತದಾರರ ಭಾಗವಹಿಸಿ ಅವರ ಮೊಬೈಲ್‌ನಲ್ಲಿ ಭಾರತ ಚುನಾವಣಾ ಆಯೋಗದ VHA ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಹೆಸರು ಸೇರ್ಪಡೆ ಮಾಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.