10 total views
ಮೈಸೂರು:-ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರಿನ ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಬಹುಮಾನಗಳನ್ನು ಪಡೆದಿದ್ದು, ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಪ್ರಥಮ ಪಿಯುಸಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೇಘನಾ.ಎಂ ಮತ್ತು ಯಶಸ್ವಿನಿ.ಎಂ.ಜೆ ಪ್ರಥಮ ಬಹುಮಾನ, ಆಶುಭಾಷಣ ಸ್ಪರ್ಧೆಯಲ್ಲಿ ಆದರ್ಶ್.ಎ.ಎಸ್. ಪ್ರಥಮ ಬಹುಮಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಕೃತಾಯಿ ಇಂಜು ಜಂಗಲೆ ತೃತೀಯ ಬಹುಮಾನ, ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ಪ್ರಾರ್ಥನಾ.ಎ.ಎಸ್. ತೃತೀಯ ಬಹುಮಾನ, ಭಾವಗೀತೆ ಸ್ಪರ್ಧೆಯಲ್ಲಿ ವಿನಾಯಕ ತೃತೀಯ ಬಹುಮಾನ ಮತ್ತು ಜನಪದಗೀತೆ ಸ್ಪರ್ಧೆಯಲ್ಲಿ ಅರ್ಪಿತಾ ಮರಾಠೆ ತೃತೀಯ ಬಹುಮಾನ ಗಳಿಸಿದ್ದಾರೆ.
ದ್ವಿತೀಯ ಪಿಯುಸಿ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಬೀರೇಶ್.ಕೆ.ಎಸ್. ಪ್ರಥಮ ಬಹುಮಾನ, ಕ್ರಿಶ್ ಗಾರ್ಲಾ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಶ್ರೇಯಾ ಹರೀಶ್ ಚಿತ್ರಕಲೆ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿದ್ದಾರೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.