6 total views
ಶಿಕಾರಿಪುರ : ಶಿವಮೊಗ್ಗದ ಸೈಯಾದ್ರಿ ಕಾಲೇಜಿನ ಕ್ಯಾಂಪಸ್ ನಲ್ಲಿ ಬಿ ಕೆಟಗರಿಯ 16 ರಿಂದ 20 ಕೋಟಿ ವೆಚ್ಚದಲ್ಲಿ ಸೈನ್ಸ್ ಸೆಂಟರ್ ನಿರ್ಮಾಣ ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದಿದೆ, ಇದರಿಂದ ನಮ್ಮ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ನೂತನ ಪ್ರಯೋಗಾಲಯ ಸಹಕಾರಿಯಾಗಲಿದೆ, ಈ ರೀತಿಯ ಕೊಡುಗೆಯನ್ನು ನಮ್ಮ ಕೇಂದ್ರ ಸರ್ಕಾರ ಶಿವಮೊಗ್ಗಕ್ಕೆ ನೀಡಿದೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ಅವರು ತಿಳಿಸಿದರು ಭಾರತ ಸರ್ಕಾರ ಅಟಲ್ ಇನ್ನೋವೇಶನ್ ಮಿಷನ್, ನೀತಿ ಆಯೋಗ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಮತ್ತು ಮದುವತಿ ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿ ವಿದ್ಯಾರ್ಥಿಗಳು ಮಾಡಿದ ವಿಜ್ಞಾನದ ಮಾಡೆಲ್ ಗಳನ್ನು ವೀಕ್ಷಿಸಿ ಮಾಹಿತಿ ಪಡೆದರು
ಕಾರ್ಯಕ್ರಮದಲ್ಲಿ ಡಿಡಿಪಿಐ ಬಸವರಾಜಪ್ಪ, ಶಿಕಾರಿಪುರ ಶಿಕ್ಷಣಾಧಿಕಾರಿ ಶಶಿಧರ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಿವ್ ಕುಮಾರ್, ಪ್ರಾಂಶುಪಾಲರಾದ ರೋಹಿತ್ ಮತ್ತು ಇತರರು ಉಪಸ್ಥಿತರಿದ್ದರು
ವರದಿ. MH ರಾಘವೇಂದ್ರ ಸಂಪೋಡಿ