8 total views
ಮೈಸೂರು:-ಮೈಸೂರು ಜಿಲ್ಲೆಯಲ್ಲಿ 1.45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್ ಎ ವೆಂಕಟೇಶ್ ಆರೋಪ ಮಾಡಿರುವ ಹಿನ್ನೆಲೆ, ಕಾನೂನುಬದ್ದವಾಗಿ 1,20,780 ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ನಿಯಮಾವಳಿಯಂತೆ 1,20,780 ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಪುನರಾವರ್ತನೆಗೊಂಡ ಪ್ರಕರಣಗಳಲ್ಲಿ ಕಾನೂನುಬದ್ದವಾಗಿ ಮತದಾರರನ್ನು ಕೈ ಬಿಡಲಾಗಿದೆ. ಈ ಸಂಬಂಧ ನಮೂನೆ-7 ನ್ನು ಪಡೆದುಕೊಂಡು ಸ್ಥಳ ಪರಿಶೀಲನೆ ಹಾಗು ಬೂತ್ ಮಟ್ಟದ ಅಧಿಕಾರಿಗಳ ವರದಿ ನಂತರ ಮತದಾರರನ್ನು ಕೈಬಿಡಲಾಗಿದೆ. ಈ ಬಾರಿ ಮತದಾರರ ಒಂದೇ ರೀತಿಯ ಭಾವಚಿತ್ರ ಹಾಗೂ ವಿವರಗಳನ್ನೊಳಗೊಂಡ ಮತದಾರರನ್ನು ಪರಿಶೀಲಿಸಿ ಪಟ್ಟಿಯಿಂದ ಕೈಬಿಟ್ಟಿರುವ ಕಾರಣ ಸಂಖ್ಯೆ ಹೆಚ್ಚಾಗಿದೆ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ ಎಂದು ಹೇಳಿದ್ದಾರೆ.