208 total views
ಮೈಸೂರು :ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಶಾಸಕ ಬಿ.ಹರ್ಷವರ್ಧನ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.ಕಾಲೇಜು ಶಿಕ್ಷಣ ಇಲಾಖೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇನ್ನು ಜಾತಿ ವ್ಯವಸ್ಥೆ ಜೀವಂತವಾಗಿದೆ.ಉದ್ಯೋಗವನ್ನು ಹುಡುಕಿಕೊಂಡು ಹೋದಾಗ ಜಾತಿಯ ವ್ಯವಸ್ಥೆ ಯುವಕರಿಗೆ ತಿಳಿಯುತ್ತದೆ. ಐದು ವರ್ಷಗಳಲ್ಲಿ ಕಾಲೇಜನ್ನು ಸಾಕಷ್ಟು ಅಭಿವೃದ್ಧಿಪಡಿಸಿದ್ದೇನೆ. ಸಂಸದರಾದ ವಿ ಶ್ರೀನಿವಾಸ ಪ್ರಸಾದ ರವರು ಸಾಕಷ್ಟು ಅಭಿವೃದ್ಧಿ ಮಾಡುತ್ತಿದ್ದಾರೆ. ಅವರನ್ನು ನೆನೆಸಿಕೊಳ್ಳಬೇಕು ನಾವು. ಗ್ರಾಮಾಂತರ ಪ್ರದೇಶಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದಲ್ಲಿ ಅತ್ಯುತ್ತಮ ಸಂವಿಧಾನವನ್ನು ಅಂಬೇಡ್ಕರ್ ಅವರು ನೀಡಿದ ಪರಿಣಾಮ ಇಂದು ಎಲ್ಲರೂ ಶಿಕ್ಷಣವನ್ನು ಕಲಿಯುತ್ತಿದ್ದೇವೆ. ಯುವಶಕ್ತಿಗಳು ದಾರಿ ತಪ್ಪಬಾರದು. ಗುರಿ ಸಾಧಿಸಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಇನ್ನು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಂಗಾಯಣ ಮಾಜಿ ನಿರ್ದೇಶಕ ಜನಾರ್ಧನ್ ಜನ್ನಿ, ನಗರಸಭಾಧ್ಯಕ್ಷ ಮಹದೇವಸ್ವಾಮಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿಎಸ್ ರಾಮು, ಚಲನಚಿತ್ರ ಹಿನ್ನೆಲೆ ಗಾಯಕ ನಿಶ್ಚಯ್ ಜೈನ್, ಕಾಲೇಜಿನ ಪ್ರಾಂಶುಪಾಲರ ಡಾ. ರಾಮೇಗೌಡ, ಅಭಿವೃದ್ಧಿ ಸಮಿತಿ ಸದಸ್ಯರಾದ, ಬಸವರಾಜು ವಿಠಲ್, ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.