175 total views
ಕಲಬುರಗಿ: ತಾಲೂಕಿನ ಸೋಮನಾಥಳ್ಳಿ ಗ್ರಾಮದಲ್ಲಿ ಫೆಬ್ರವರಿ ದಿನಾಂಕ 5 ರಂದು ಬೆಳಗ್ಗೆ 11 ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ 903 ನೇ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕೋಲಿ ಸಮಾಜದ ಯುವ ಮುಖಂಡರಾದ ನಿಂಗರಾಜ್ ಆರ್.ಕೆ, ದ್ಯಾವಣ್ಣ ನಾಯಕೋಡಿ, ಮೌನೇಶ ಕಳಸ ತಿಳಿಸಿದ್ದಾರೆ. ತೋನಸನಹಳ್ಳಿಯ ಅಲ್ಲಮಪ್ರಭು ಪೀಠದ ಪೂಜ್ಯ ಮಲ್ಲಣ್ಣಪ್ಪ ಸ್ವಾಮೀಜಿ, ಕಟ್ಟಿಸಂಗಾವಿ ಭೀಮಾಬ್ರಿಜ್‌ನ ಬಸಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಶಾಸಕ ಎಂ.ವೈ. ಪಾಟೀಲ್ ಉದ್ಘಾಟಿಸುವರು. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಧ್ವಜಾರೋಹಣ ನೆರವೇರಿಸುವರು. ಮಾಜಿ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಅಫಜಲಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಕುಮಾರ ನಾಟೀಕಾರ, ವಿಠ್ಠಲ್ ಹೇರೂರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ್, ಜಿಪಂ ಮಾಜಿ ಸದಸ್ಯ ದಿಲೀಪ್ ಆರ್. ಪಾಟೀಲ್, ಪ್ರಮುಖರಾದ ಅವ್ವಣ್ಣ ಮ್ಯಾಕೇರಿ, ರಾಜಗೋಪಾಲರಡ್ಡಿ, ಶೋಭಾ ಬಾಣಿ, ಸಾಯಬಣ್ಣ ನೀಲಪ್ಪಗೋಳ ಸೇರಿ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೋಲಿ ಸಮಾಜದ ಜಿಲ್ಲಾಧ್ಯಕ್ಷ ರಮೇಶ ನಾಟೀಕಾರ್ ಅಧ್ಯಕ್ಷತೆ ವಹಿಸುವರು. ಹೆಚ್ಚಿನ ಸಂಖ್ಯೆಯಲ್ಲಿ ಕುಲಬಾಂಧವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ವರದಿಗಾರರು -ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್