423 total views
ಮೈಸೂರು :-ಜೆಡಿಎಸ್‌ನ ಮುಖವಾಡ ಕಳಚಿದರೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ ಕಾಣಲಿದೆ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿಯ ಬಿ ಟೀಮ್ ಆಗಿದೆ. ಇದನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.ನಗರದ ಕಾಂಗ್ರೆಸ್ ಕಚೇರಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತ ಹಾಗೂ ಪ್ರತಿ ಮನೆಯ ಮಹಿಳೆಗೆ 2 ಸಾವಿರ ರೂ. ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಇಂದು ಕರ್ನಾಟಕ ರಾಜ್ಯ ಶೇ.40ರಷ್ಟು ಕಮಿಷನ್‌ಗೆ ಹೆಸರುವಾಸಿಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇರೆ ರಾಜ್ಯಗಳಿಗೆ ತೆರಳಿದರೆ ಅಲ್ಲಿ ಶೇ.40ರಷ್ಟು ಕಮಿಷನ್ ಸರ್ಕಾರ ಎಂದು ಸ್ವಾಗತಿಸಲಾಗುತ್ತಿದೆ. ಜತೆಗೆ ಪೇ ಸಿಎಂ ಎಂದು ಹೇಳಲಾಗುತ್ತಿದೆ. ಹೀಗಿದ್ದರೂ ರಾಜ್ಯಕ್ಕೆ 8 ಬಾರಿ ಪ್ರಧಾನಿ ಮೋದಿ ಆಗಮಿಸಿದಾಗ ಸರ್ಕಾರದ ಭಷ್ಟಾಚಾರದ ಬಗ್ಗೆ ಮಾತನಾಡಿಲ್ಲ. ನಾನು ತಿನ್ನುವುದಿಲ್ಲ, ತಿನ್ನುವವರಿಗೂ ಬಿಡುವುದಿಲ್ಲ ಎಂದು ಹೇಳುವ ನರೇಂದ್ರ ಮೋದಿಯವರು, ಕರ್ನಾಟಕದಲ್ಲಿ ಅವರಷ್ಟು ಸರ್ಕಾರ ಭಷ್ಟಾಚಾರ ನಡೆಸುತ್ತಿದ್ದರೂ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ಈ ಬಗ್ಗೆ ಬೇರೆ ಕಂಟ್ರಾಕ್ಟರ್ ಸಂಘದ ಅಧಕ್ಷ ಕೆಂಪಣ್ಣ, ರೂಸಾ ಸಂಸ್ಥೆ ಕಮಿಷನ್ ಪಡೆಯುವ ಬಗ್ಗೆ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿ ಈ ಬಗ್ಗೆ ಮಾತನಾಡಿಲ್ಲ. ಸರ್ಕಾರ ಮಠಗಳಿಗೆ ನೀಡುವ ಅನುದಾನದಲ್ಲಿ ಶೇ.10ರಷ್ಟು ಕಮಿಷನ್ ಕೊಡಬೇಕು ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ರಾಜ್ಯದಲ್ಲಿ ನಡೆದಿದ್ದ ಪಿಎಸ್‌ಐ ಸ್ಕ್ಯಾಮ್‌ನಲ್ಲಿ ಡಿಜಿಪಿ ಜೈಲಿಗೆ ಹೋದರು. ಆದರೆ ಆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಗೃಹ ಸಚಿವರಾಗಿದ್ದರು. ಆದರೂ ಯಾವುದೇ ನೈತಿಕ ಹೊಣೆ ಹೊರಲು ಅವರು ಸಿದ್ಧರಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಎಲ್ಲವನ್ನೂ ಮಾರಾಟಕ್ಕಿಟ್ಟಿದೆ. ಅವರಷ್ಟು ಸರ್ಕಾರದ ಸಚಿವರಾದ ಎಂಟಿಬಿ ನಾಗರಾಜ್ ಭಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗೆಯೇ ಶಾಸಕ ಯತ್ನಾಳ್ ಹೇಳಿದಂತೆ ಮುಖ್ಯಮಂತ್ರಿ ಹುದ್ದೆ ಸಹ ಮಾರಾಟದ ವಸ್ತುವಾಗಿದೆ. ಬಿಜೆಪಿಯ ಈ ದುರಾಡಳಿತದಿಂದ ಕೆಲವು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಸರ್ಕಾರ ರಾಜ್ಯಕ್ಕೆ ಅಗತ್ಯವಿದೆಯೇ ಎಂಬುದನ್ನು ಜನರು ಅರಿತುಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಭೂಸ್ವಾಧೀನ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪ್ರಬಲ ಹೋರಾಟ ಮಾಡಿತು. ಆದರೆ ಜೆಡಿಸ್ ಸ್ವಲ್ಪವೂ ವಿರೋಧ ಮಾಡಲಿಲ್ಲ. ಈ ಮೂಲಕ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಜೆಡಿಎಸ್ ಮಾಡಿದೆ. ಮತಾಂತರ ನಿಷೇಧ ಕಾಯಿದೆ ಜಾರಿ ವೇಳೆ ಸದನದಲ್ಲಿ ಧನಿ ಎತ್ತಲಿಲ್ಲ. ಮೈಸೂರಿನ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಜೆಡಿಎಸ್‌ನ ಪರ ಹೊಂದಾಣಿಕೆಯಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ರಾಷ್ಟ್ರಪತಿ ಚುನಾವಣೆ ವೇಳೆ ಬಿಜೆಪಿಯೇ ಒಂದಾದರೆ ಉಳಿದೆಲ್ಲ ಪಕ್ಷಗಳು ಒಂದಾಗಿದ್ದವರು. ಆದರೆ ಜೆಡಿಎಸ್ ಬಿಜೆಪಿಗೆ ಸಹಕಾರ ನೀಡಿತು. ಉಪ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಮಾರ್ಗರೇಟ್ ಆಳ್ವಾರವರ ವಿರುದ್ಧವಾಗಿ ಜೆಡಿಎಸ್‌ನವರು ಮತ ಚಲಾಯಿಸುವ ಮೂಲಕ ತಾನು ಅಲ್ಪಸಂಖ್ಯಾತರ ವಿರೋಧಿ ಎಂಬುದನ್ನು ಸಬೀತು ಪಡಿಸಿದೆ ಎಂದು ಜೆಡಿಎಸ್ ವಿರುದ್ಧ ಕಿಡಿಕಾರಿದರು.