223 total views
ಮೈಸೂರು :-ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಅವರು ತಿಳಿಸಿದರು.ಗುರುವಾರ ನಗರದ ಆಡಳಿತ ತರಬೇತಿ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯ ಮತದಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೊದಲು ಮತದಾನ ಮಾಡಲು ಜನ ಭಯಪಡುತ್ತಿದ್ದರು. ಆದರೆ ಇಂದು ಚುನಾವಣಾ ಆಯೋಗ ಅಂತಹ ಭಯದ ವಾತಾವರಣವನ್ನು ದೂರ ಮಾಡಿದೆ. ದಿನದಿಂದ ದಿನಕ್ಕೆ ಹೊಸ ಮತದಾರರು ಹುಟ್ಟಿಕೊಳ್ಳುತ್ತಿದ್ದಾರೆ. ಹೀಗಾಗಿ ಮತದಾನದ ಬಗ್ಗೆ ಹಾಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.