454 total views
ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ವರುಣಾ ವಿಧಾನಸಭೆ ಕ್ಷೇತ್ರದ ಬಿಜೆಪಿಯ ನೂರಾರು ಮುಖಂಡರನ್ನು ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಬರ ಮಾಡಿ ಕೊಂಡರು
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಆರ್ ಧ್ರುವ ನಾರಾಯಣ, ಮಾಜಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪ, ಎಂಎಲ್ಸಿ ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಎ.ಆರ್ ಕೃಷ್ಣಮೂರ್ತಿ, ಸುನೀತಾ ವೀರಪ್ಪಗೌಡ, ಪಕ್ಷದ ಜಿಲ್ಲಾಧ್ಯಕ್ಷ ಡಾ.ಬಿ ಜೆ ವಿಜಯ್ ಕುಮಾರ್, ಯುವ ಮುಖಂಡ ಸುನೀಲ್ ಬೋಸ್, ಪುರಸಭೆ ಅಧ್ಯಕ್ಷ ಟಿ.ಎಂ ನಂಜುಂಡಸ್ವಾಮಿ ಹಾಗೂ ಶಾಸಕ ಯಾತಿಂದ್ರ ಸಿದ್ದರಾಮಯ್ಯ ಮತ್ತಿತರರು ಭಾಗಿಯಾಗಿದ್ದರು.