578 total views
ಮೈಸೂರು :-ಮೈಸೂರು ಯಶಸ್ವಿ ಸಭಾಂಗಣ ದಲ್ಲಿ ಒಂದು ಸರಳ ಪ್ರೇಮ ಕಥೆ ಟೀಸರ್ ರಿಲೀಸ್ ಮಾಡಲಾಯಿತು.ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀನಿ ಅನ್ನೋದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ.…