482 total views
ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಮಾರ್ಚ್ 10, 11 ಮತ್ತು 12 ರ ವರೆಗೆ 3 ದಿನಗಳ ಕಾಲ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ “18 ನೇ ರಾಷ್ಟ್ರೀಯ ಯೂತ್ ಅಥ್ಲೆಟಿಕ್ ಚಾಂಪಿಯನ್ಶಿಪ್” ನ ಸಮಾರೋಪ ಸಮಾರಂಭದಲ್ಲಿ ಇಂದು ದಿನಾಂಕ 12-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ನಿರಂಜನ್, ಬ್ರಹ್ಮಾವರ ಮದರ್ ಪ್ಯಾಲೇಸ್ ನಿರ್ದೇಶಕರಾದ ಭರತ್ ಕುಮಾರ್ ಶೆಟ್ಟಿ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಹೆಚ್.ಟಿ ಮಹದೇವ್, ಮಣಿಪಾಲ್ ಹೆಚ್.ಪಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ, ಎ.ಎಫ್.ಐ ಓರ್ಗನೈಸಿಂಗ್ ಡೆಲಿಗೇಟ್ ಸತೀಶ್ ಉಚ್ಚಿಲ, ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವ ಸಲಹೆಗಾರರಾದ ಅಶೋಕ್ ಅಡ್ಯಂತಾಯ,ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆಂಪರಾಜ್, ಕಾರ್ಯದರ್ಶಿಗಳಾದ ರಾಜವೇಲು, ದಿನೇಶ್ ಕುಮಾರ್, ಕೋಶಾಧಿಕಾರಿಗಳಾದ ದೀಪಕ್ ರಾಮ್ ಬಾಯಾರಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.