319 total views
ಮಾ. 14 ಉಡುಪಿಯಲ್ಲಿ ವಿಜಯ ಸಂಕಲ್ಪ ಯಾತ್ರೆ – ಪೂರ್ವ ತಯಾರಿಯ ಬಗ್ಗೆ ವಳಕಾಡು ವಾರ್ಡಿನ ಕಾರ್ಯಕರ್ತರೊಂದಿಗೆ ಶಾಸಕ ರಘುಪತಿ ಭಟ್ ಸಭೆ
ಮಾರ್ಚ್ 14 ರಂದು ಉಡುಪಿಯಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು ಇದರ ಪೂರ್ವ ತಯಾರಿಯ ಬಗ್ಗೆ ಇಂದು ದಿನಾಂಕ 13-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ವಳಕಾಡು ವಾರ್ಡಿನ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಮಾರ್ಚ್ 14 ರಂದು ಉಡುಪಿಯ ಪರ್ಕಳದಿಂದ ಬ್ರಹ್ಮಾವರದ ವರೆಗೆ ನಡೆಯರುವ ವಿಜಯ ಸಂಕಲ್ಪ ಯಾತ್ರೆಯ ಪ್ರಯುಕ್ತ ಬೃಹತ್ ವಾಹನ ರ‍್ಯಾಲಿ ನಡೆಯಲಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಬೂತ್ ಅಧ್ಯಕ್ಷರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.