577 total views
ಮೈಸೂರು :-ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲಾಗಿ ತೆಗೆದುಕೊಂಡಿದ್ದಾರೆ.
ಹಳೇ ಮೈಸೂರು ಭಾಗದ ಪ್ರತಿಷ್ಠಿತ ಕಣವಾದ ಚಾಮುಂಡೇಶ್ವರಿ ಕ್ಷೇತ್ರದ ಸಂಬಂಧ ಸಿದ್ದರಾಮಯ್ಯ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ರು. ಈ ಬಾರಿ ಶಾಸಕ ಜಿ.ಟಿ.ದೇವೇಗೌಡರನ್ನು ಹಣಿಯಲು ಸಿದ್ದರಾಮಯ್ಯ ಪಣ ತೊಟ್ಟಿದ್ದು, ಕ್ಷೇತ್ರದಲ್ಲಿ ತಳ ಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಟಿಕೆಟ್ ಫೈನಲ್ ಮಾಡುವ ಸಲುವಾಗಿ ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಸಭೆ ನಡೆಸಿದ್ದು, ಒಗ್ಗಟ್ಟಿನ ಮಂತ್ರದ ಮೂಲಕ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇನ್ನ ಯಾರಿಗೇ ಟಿಕೆಟ್ ಸಿಕ್ರೂ ಉಳಿದವರು ಗೆಲುವಿಗೆ ಶ್ರಮಿಸುವಂತೆ ಸಿದ್ದು ಸೂಚನೆ ನೀಡಿದ್ದು, ಶಾಸಕ G.T.ದೇವೇಗೌಡರನ್ನು ಸೋಲಿಸಲು ಕಾಂಗ್ರೆಸ್ ನಾಯಕರು ಹಠಕ್ಕೆ ಬಿದ್ದಿದ್ದಾರೆ.