370 total views
ಮೈಸೂರು :-ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದ ಡಾ.ಕೆ.ವಿ.ರಾಜೇಂದ್ರ ಅವರು ಇಂದು ನಗರದ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ, ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರ ಭದ್ರತಾ ಕೊಠಡಿ ಸೇರಿದಂತೆ ವಿವಿಧ ಕೊಠಡಿಗಳ ಕುರಿತ ಪರಿಶೀಲನೆ ನಡೆಸಿದರು.
ಜಿಲ್ಲೆಯ ಎಲ್ಲಾ ಹನ್ನೊಂದು ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳ ದಾಸ್ತಾನು ಕೊಠಡಿ, ಮತ ಎಣಿಕೆ ಕೊಠಡಿ ಮತ್ತು ಭದ್ರತಾ ಕೊಠಡಿಗಳನ್ನು ಸ್ಥಾಪಿಸುವ ಕುರಿತು ನಗರ ಪೋಲಿಸ್ ಆಯುಕ್ತರಾದ ರಮೇಶ್ ಬಾನೊತ್ ಅವರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದರು.
ಮಾಧ್ಯಮ ಕೊಠಡಿ, ಪೊಲೀಸ್ ಕಂಟ್ರೋಲ್ ರೂಂ, ಗಣಕ ಯಂತ್ರ, ಇಂಟರ್ನೆಟ್ ಸಂಪರ್ಕ ವ್ಯವಸ್ಥೆ, ಭದ್ರತಾ ವ್ಯವಸ್ಥೆ, ಸ್ಡ್ರಾಂಗ್ ರೂಂ ವಿವಿಧ ಕೊಠಡಿಗಳ ಸ್ಥಾಪಿಸುವ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಕುರಿತು ಸ್ಥಳ ವೀಕ್ಷಣೆ ಮಾಡಿ, ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುಮಾರ್, ಸಂಚಾರ ಹಾಗೂ ಅಪರಾದ ವಿಭಾಗದ ಪೊಲೀಸ್ ಉಪ ಆಯುಕ್ತರಾದ ಜಾಹ್ನವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.