376 total views
ರೂ. 3.05 ಕೋಟಿ ವೆಚ್ಚದಲ್ಲಿ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ
ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ನಗರಸಭೆಯ ಉದ್ಯಮ ನಿಧಿಯಿಂದ ರೂ. 3.05 ಕೋಟಿ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 17-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.