364 total views
ರೂ. 2.45 ಕೋಟಿ ವೆಚ್ಚದಲ್ಲಿ ನಗರಸಭೆ ಸಿಬ್ಬಂದಿಗಳಿಗೆ ವಸತಿ ಗೃಹ ನಿರ್ಮಾಣ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಾಣ ರೂ. 2.25 ಕೋಟಿ ಕಾಮಗಾರಿ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ
ಉಡುಪಿ ನಗರ ಸಭೆಯ 2021-22ನೇ ಸಾಲಿನ ಉದ್ದಿಮೆ ನಿಧಿ ಅನುದಾನದಡಿಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ರೂ. 2.45 ಕೋಟಿ ವೆಚ್ಚದಲ್ಲಿ ನೆಲೆ ಹಾಗೂ 2 ಮಹಡಿಯ ವಸತಿ ಗೃಹ ನಿರ್ಮಾಣ ಕಾಮಗಾರಿ ಮತ್ತು ರೂ. 2.25 ಕೋಟಿ ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಇಂದು ದಿನಾಂಕ 17-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಮಣಿಪಾಲದಲ್ಲಿ ಇದರ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ ಸಭಾ ಸದಸ್ಯರು ಉಪಸ್ಥಿತರಿದ್ದರು.