277 total views
ಮಾ. 21ಬಗ್ಗೆ ಉಪ್ಪೂರು ಮಹಾಶಕ್ತಿ ಕೇಂದ್ರ ಕಾರ್ಯಕರ್ತರೊಂದಿಗೆ ಶಾಸಕ ರಘುಪತಿ ಭಟ್ ಸಭೆ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ, ಉಡುಪಿ ಜಿಲ್ಲೆ ಮಾರ್ಚ್ 21 ರಂದು ಉಡುಪಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಸಮಾವೇಶ ಆಯೋಜಿಸಿದ್ದು, ಇದರ ಪೂರ್ವ ತಯಾರಿಯ ಬಗ್ಗೆ ಇಂದು ದಿನಾಂಕ 18-03-2023 ರಂದು ಉಪ್ಪೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಯಿತು.
ಸಭೆ ನಡೆಸಿದ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮಾರ್ಚ್ 21 ರಂದು ಉಡುಪಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಮೋರ್ಚಾದ ಸಮಾವೇಶದಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮನ್ನು ಯಶಸ್ವಿಗೊಳಿಸುಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ಅಶೋಕ್ ಹೇರೂರು, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ವಿದ್ಯಾ, ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾದ ರಘುರಾಮ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು, ಶಕ್ತಿ ಕೇಂದ್ರದ ಸಂಚಾಲಕರು, ಸಹ ಸಂಚಾಲಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.