420 total views
ಮೈಸೂರು :-ಮಹಿಳೆಯರು ಹೆಚ್ಚು ಸ್ವಾಭಿಮಾನಿಗಳು. ಭಾರತ ದೇಶದಲ್ಲಿ ಮಹಿಳೆಯರನ್ನು ಹೆಚ್ಚು ಗೌರವಿಸಲಾಗುವುದು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್ ನಾಗೇಂದ್ರ ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ ದಯಾಳ್ ಅಂತ್ಯೋದಯ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ವತಿಯಿಂದ ಸಾಮಾಜಿಕ ಕ್ರೋಡೀಕರಣ ಮತ್ತು ಸಾಂಸ್ಥಿಕ ಅಭಿವೃದ್ಧಿ ಉಪ-ಘಟಕದಲ್ಲಿ ಸ್ವ-ಸಹಾಯ ಸಂಘಗಳಿಗೆ ದಶಸೂತ್ರಗಳ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಾಗೂ ವಿಶೇಷವಾಗಿ ಮಹಿಳಾ ಪೌರಕಾರ್ಮಿಕರ 50 ಸ್ವ-ಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು. ಇಲ್ಲಿ ಸೇರಿರುವ 300ಕ್ಕೂ ಹೆಚ್ಚಿನ ಮಹಿಳಾ ಸ್ವಸಹಾಯ ಸಂಘದ ಮಹಿಳೆಯರು ಈ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಿ. ಮಹಿಳೆಯರನ್ನು ಬಡತನದ ರೇಖೆಯಿಂದ ಮೇಲೆ ತರಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್…