428 total views
ಉಡುಪಿ ನಗರಸಭೆ ಸಾಮಾನ್ಯ ಸಭೆ ಇಂದು ದಿನಾಂಕ 24-03-2023 ರಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆಯಿತು. ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ನಗರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಸಭಾ ಪೌರಾಯುಕ್ತರಾದ ಆರ್.ಪಿ ನಾಯ್ಕ್, ಪ್ರೊಫೆಷನರಿ ಐ.ಎ.ಎಸ್ ಯತೀಶ್, ನಗರ ಸಭೆಯ ಸದಸ್ಯರು ಮತ್ತು ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.