320 total views
ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪೂರ್ವ ಭಾವಿ ಸಭೆ -ಶಾಸಕ ರಘುಪತಿ ಭಟ್ ಭಾಗಿ
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆ ಇಂದು ದಿನಾಂಕ 14-04-2023 ರಂದು ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಮಾತನಾಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಹಂದಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕಠಿ ಬದ್ದರಾಗಬೇಕು ಎಂದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿರಂಜನ್ ಪೂಜಾರಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಪಕ್ಷದ ಪ್ರಮುಖರಾದ ಮೋಹನ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಹಂದಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.