1,707 total views
ಶಿಡ್ಲಘಟ್ಟ:-ಮೇ 20 ರಂದು ನಗರದ ಬೆವಿಕಂ ಕಛೇರಿಯಲ್ಲಿ ಮದ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ,
ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಸಭೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ರೈತ ಸಂಘದ ಮುಖಂಡರು, ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿಯಲು, ಸದರಿ ವಿಷಯಗಳ ಬಗ್ಗೆ ಗ್ರಾಹಕರ ಸಮಸ್ಯೆಗಳನ್ನು ತಿಳಿಸಲು ಉತ್ತಮ ವೇದಿಕೆಯಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ವಿದ್ಯುತ್ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತಹ ಕೆಲಸವಾಗಲಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಪ್ರಭು ರವರು ತಿಳಿಸಿದರು.