1,807 total views
ಭಟ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಭಜನಾ ಪರಿಷತ್ ಉದ್ಘಾಟನೆ ಕಾರ್ಯಕ್ರಮವನ್ನು ಸಾರದಹೊಳೆ ನಾಮಧಾರಿ ಸಮುದಾಯ ಭವನದಲ್ಲಿ ನೇರವೆರಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯ ವಿಮಾ ವಿಭಾಗದ ಮಾನ್ಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಪುರುಷೋತ್ತಮ್ ಪಿ ಕೆ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ಧಾರ್ಮಿಕ ಭಾವನೆ ಜಾಗೃತೆ ಮಾಡುವ ಉದ್ದೇಶದಿಂದ ಭಜನಾ ಪರಿಷತ್ ರಚನೆ ಮಾಡಲಾಗುತ್ತಿದೆ. ಎಂದರು.
ಈ ಸಂದರ್ಭದಲ್ಲಿ ಬೈಂದೂರು ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷರಾದ ಶ್ರೀಯುತ ರಘುರಾಮ್ ಪೂಜಾರಿ, ಬೈಂದೂರು ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ, ನ್ಯಾಯವಾದಿಗಳಾದ ಶ್ರೀ ನಾಗರಾಜ ನಾಯ್ಕ, ವಿಮಾ ವಿಭಾಗದ ಯೋಜನಾಧಿಕಾರಿಗಳಾದ ಸತೀಶ ಸರ್ ರವರು ಹಾಗೂ ಭಟ್ಕಳ ತಾಲೂಕು ಯೋಜನಾಧಿಕಾರಿ ಗಣೇಶ್ ನಾಯ್ಕ ರವರು ಉಪಸ್ಥಿತರಿದ್ದರು. ಹಾಗೂ ತಾಲೂಕಿನ 37 ಪುರುಷ ಹಾಗೂ ಮಹಿಳಾ ಭಜನಾ ಮಂಡಳಿಯವರು ಹಾಜರಿದ್ದು, ಎಲ್ಲಾ ಭಜನಾ ಸಮಿತಿಗಳ ಉಪಸ್ಥಿತಿಯಲ್ಲಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.