2,260 total views
ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಬಿ.ಎನ್.ರವಿಕುಮಾರ್ ರವರ
ಅಧ್ಯಕ್ಷತೆಯಲ್ಲಿ ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಇಲಾಖಾವಾರು 2023-24ನೇ ಸಾಲಿನ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯನ್ನು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ವಿವಿಧ ಹಾಗೂ ಅನುಷ್ಠಾನ ಇಲಾಖೆಗಳ 2023-24ನೇ ಸಾಲಿನ ಪ್ರಗತಿ ವರದಿಗಳ ಬಗ್ಗೆ ಮಾಹಿತಿ ನೀಡಿದರು. ಅಂಗನವಾಡಿ ಅವ್ಯವಸ್ಥೆ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಸಮವಸ್ತ್ರ, ಶೂ ವಿತರಣೆ, ಕೃಷಿ, ರೇಷ್ಮೆ, ತೋಟಗಾರಿಕೆ, ಅರಣ್ಯ ಇಲಾಖೆ, ವಸತಿ, ನರೇಗಾ ಯೋಜನೆಯ ಬಗ್ಗೆ ಸೇರಿದಂತೆ ಎಲ್ಲಾ ಇಲಾಖೆಗಳು, ಅನುಷ್ಠಾನ ಇಲಾಖೆಗಳ ಪ್ರಗತಿಯ ಬಗ್ಗೆ ಹಾಗೂ ಬಹುಗ್ರಾಮಕುಡಿಯುವ ನೀರಿನ ಯೋಜನೆಯ ಅಪೂರ್ಣ ಕಾಮಗಾರಿ ಹಾಗೂ ಬೆಸ್ಕಾಂ ಸಹಿತ ವಿವಿಧ ಇಲಾಖೆಯ ಪಾಲನವರದಿ ಕುರಿತು ಚರ್ಚೆ ನಡೆಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಾಲ್ಲೂಕಿನಾದ್ಯಂತ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗೆಗಿನ PPT ಯನ್ನು ಬಿತ್ತರಿಸಲಾಯಿತು. ಇದಕ್ಕೆ ಮಾನ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎನ್.ರವಿಕುಮಾರ್ ರವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಿಡ್ಲಘಟ್ಟ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎನ್.ರವಿಕುಮಾರ್ ರವರು, ಮಾನ್ಯ ಆಡಳಿತಾಧಿಕಾರಿ ಆಶಾಲತಾ.ಆರ್. ತಾಲ್ಲೂಕು ಪಂಚಾಯಿತಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ರವರು, ತಹಶೀಲ್ದಾರ್ ಬಿ.ಎನ್.ಸ್ವಾಮಿ, ನಗರಸಭೆ ಕಮಿಷನರ್ ಶ್ರೀಕಾಂತ್, ಶಿಡ್ಲಘಟ್ಟ ತಾಲ್ಲೂಕಿನ ವೃತ್ತ ನಿರೀಕ್ಷಕರಾದ ನಂದಕುಮಾರ್, ಮಾನ್ಯ ನರೇಗಾ ಸಹಾಯಕ ನಿರ್ದೇಶಕರವರಾದ ಚಂದ್ರಪ್ಪ ರವರು, ವಿವಿಧ ಎಲ್ಲಾ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ ಸೇರಿದಂತೆ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ ಸಹ ಹಾಜರಿದ್ದರು.