3,993 total views
ಬೆಂಗಳೂರು: ನಗರದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪಕ್ಷದ ಹಿರಿಯರಿಗೆ ಗೌರವ ನಮನ ಸಲ್ಲಿಸಲಾಯಿತು. ದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ ದಿವಸ ಮತ್ತು “ಕರ್ನಾಟಕದ ಕೇಸರಿ” ಎಂದೇ ಪ್ರಖ್ಯಾತರಾಗಿದ್ದ ಭಾರತೀಯ ಜನಸಂಘದ ಸಂಸ್ಥಾಪಕ ಸದಸ್ಯ ಜಗನ್ನಾಥರಾವ್ ಜೋಶಿ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿಕುಮಾರ್, ಸಿದ್ದರಾಜು, ಮಾಜಿ ಶಾಸಕ ಮತ್ತು ರಾಜ್ಯ ವಕ್ತಾರ ಪಿ ರಾಜೀವ್, ರಾಜ್ಯ ಖಜಾಂಚಿ ಸುಬ್ಬ ನರಸಿಂಹ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ. ಮಂಜುನಾಥ್, ಹಿರಿಯ ಪತ್ರಕರ್ತ ದು.ಗು. ಲಕ್ಷ್ಮಣ, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.