3,946 total views
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಲು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಮಹಾನಗರ ಬಿಜೆಪಿ ಘಟಕಗಳ ವತಿಯಿಂದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್ಯುತ್ ದರ ಹೆಚ್ಚಳವನ್ನು ಯಥಾಸ್ಥಿತಿಗೆ ತರಬೇಕು; 10 ಕೆಜಿ ಅಕ್ಕಿ ಕೊಡುವ ಭರವಸೆಯನ್ನು ಯಥಾವತ್ ಜಾರಿ ಮಾಡಬೇಕು ಎಂದು ಆಗ್ರಹಿಸಲಾಯಿತು. ಕಾಂಗ್ರೆಸ್ ಸರಕಾರದ ಸುಳ್ಳು ಭರವಸೆಗಳ ವಿರುದ್ಧ ಘೋಷಣೆ ಕೂಗಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ಕುಮಾರ್ ಕಟೀಲ್, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ. ಸದಾನಂದಗೌಡ, ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ಹಾಲಪ್ಪ ಆಚಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಮಾಜಿ ಶಾಸಕ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಮುಖಂಡರಾದ ತಾರಾ ಅನುರಾಧಾ, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.