2,592 total views
ಸೊರಬ:ಬೈಕ್ ಕಳುವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 12 ಬೈಕ್ಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೊರಬ ತಾಲೂಕಿನ ಕಮನವಳ್ಳಿ ಗ್ರಾಮದ ಮಂಜುನಾಥ(25) ಹಾಗೂ ಹಿರೇಚೌಟಿ ಗ್ರಾಮದ ಸಿ.ಕೆ. ಅನಿಲ (22) ಬಂಧಿತ ಆರೋಪಿಗಳು. ಜಡೆ ಗ್ರಾಮದ ಸಂತೆ ಮೈದಾನದ ಬಳಿ ನಿಲ್ಲಿಸಿದ್ದ ಬೈಕ್ವೊಂದು ಕಳುವಾಗಿತ್ತು. ಈ ಸಂಬoಧ ಬೈಕ್ ಮಾಲೀಕ ಚಂದ್ರ ಅವರು ಆನವಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಬೈಕ್ ಕಳ್ಳತನದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು. ವಿಚಾರಣೆ ನಡೆಸಿದಾಗ ಬಂಧಿತರು ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು, ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೆಕೆರೂರು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಸೇರಿದಂತೆ ಒಟ್ಟು 12 ಬೈಕ್ಗಳನ್ನು ಕಳುವು ಮಾಡಿರುವುದು ಬೆಳಕಿಗೆ ಬಂದಿದೆ. ಬಂಧಿತರಿoದ ಅಂದಾಜು 4.85 ಲಕ್ಷ ರೂ. ಮೌಲ್ಯದ 12 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಿವಾನಂದ ಮದರಖಂಡಿ ಹಾಗೂ ಸೊರಬ ಸಿಪಿಐ ಎಲ್. ರಾಜಶೇಖರ್ ಮೇಲ್ವಿಚಾರಣೆಯಲ್ಲಿ ಆನವಟ್ಟಿ ಪಿಎಸ್ಐಗಳಾದ ರಾಜುರೆಡ್ಡಿ ಬೆನ್ನೂರು ಮತ್ತು ವಿಠಲ್ ಎಂ.ಅಗಾಸಿ ನೇತೃತ್ವದ ತಂಡ ಪ್ರಕರಣವನ್ನು ಬೇಧಿಸಿದೆ. ತಂಡದಲ್ಲಿ ಹೆಡ್ ಕಾನ್ಸ್ಟೇಬಲ್ಗಳಾದ ಗಿರೀಶ್, ಖಲಂದರ್, ಹರೀಶ್, ಕಾನ್ಸ್ಟೇಬಲ್ಗಳಾದ ಜಗದೀಶ್, ಮಂಜುನಾಥ್, ಮಲ್ಲೇಶ್, ಹರಿಪ್ರಸಾದ್, ಹನುಮಂತ, ಕೃಷ್ಣ, ಇಂದ್ರೇಶ್, ಗುರುರಾಜ್, ವಿಜಯ್ ಕುಮಾರ್ ಪಾಲ್ಗೊಂಡಿದ್ದರು.
ವರದಿ-ಸಂದೀಪ ಯು.ಎಲ್.