2,582 total views
ಗೋಕರ್ಣ ವಲಯ ಮಟ್ಟದ ಪ್ರೌಢಶಾಲೆಗಳ 2023-24ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಸಕರಿಂದ ಬಹುಮಾನ ವಿತರಣೆ
ಉತ್ತರಕನ್ನಡ: ಗಂಗೆಕೊಳ್ಳದ ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಗೋಕರ್ಣ ವಲಯ ಮಟ್ಟದ ಪ್ರೌಢಶಾಲೆಗಳ 2023-24ನೇ ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ದಿನಕರ ಶೆಟ್ಟಿಯವರು ಬಹುಮಾನ ವಿತರಣೆ ಮಾಡಿದರು.
ನಾಡುಮಾಸ್ಕೇರಿ ಗ್ರಾಮಪಂಚಾಯತ್ ಉಪಾಧ್ಯಕ್ಷೆ ವಿಜಯಾ ನಾಯಕ, ಗಂಗೆಕೊಳ್ಳದ ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಎನ್. ಆರ್. ನಾಯಕ, ಗ್ರಾಮಪಂಚಾಯತ್ ಸದಸ್ಯರುಗಳಾದ ರಾಜೇಶ ನಾಯಕ, ಚಂದ್ರಶೇಖರ ನಾಯ್ಕ, ದಯಾ ಮೆತಾ, ನಾಗಾ ತಾಂಡೆಲ್, ರೋಹಿಣಿ ನಾಯ್ಕ, ಭದ್ರಕಾಳಿ ಪ್ರೌಢಶಾಲೆಯ ಪ್ರಾಂಶುಪಾಲ ಸಿ. ಜಿ. ನಾಯ್ಕ, ನಾಡುಮಾಸ್ಕೇರಿ ಪ್ರೌಢಶಾಲೆಯ ಪ್ರಾಂಶುಪಾಲೆ ಪದ್ಮಾ ನಾಯಕ ಅವರು ವೇದಿಕೆಯಲ್ಲಿ ಇದ್ದರು.