2,561 total views
ಕಾಳಗಿ:ತಾಲ್ಲೂಕಿನ ಸರಕಾರಿ ಪ್ರೌಢ ಶಾಲೆ ಕೊಡದೂರ ಬಾಲಕಿಯರು ಖೋ ಖೋ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ ಆಗಿರುವುದು ನಮ್ಮ ಭಾಗದ ಬಾಲಕಿಯರಿಗೆ ಸಿಕ್ಕ ದೊಡ್ಡ ಯಶಸ್ಸು, ಮಹಾತೆಂಶ ಕಂಟಿಮಠರವರ ಮಾರ್ಗ ದರ್ಶನದಲ್ಲಿ ಸುಮಾರು 10ನೇ ಬಾರಿಗೆ ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಂತಹ ಅದ್ಭುತ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಕುಪೆಂದ್ರ ರಾವೂರ ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದವರೆಗೆ ಆಯ್ಕೆಯಾಗಿ ಗ್ರಾಮಕ್ಕೆ ಉತ್ತಮ ಹೆಸರು ತರಬೇಕೆಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿ ಸಂತೋಷ ವ್ಯಕ್ತಪಡಿಸಿದರು.