2,631 total views
ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟಕ್ಕೆ ಉಸ್ತುವಾರಿ ಸಚಿವರ ಚಾಲನೆ
ಕುಮಟಾದ ಮಹಾತ್ಮಾಗಾಂಧಿ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರೊಂದಿಗೆ ಉದ್ಘಾಟಿಸಲಾಯಿತು.
ಜಿಲ್ಲಾಡಳಿತ, ಜಿ. ಪಂ. ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ ಉತ್ತರಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟವು ನೆರವೇರಿತು.
ಕುಮಟಾ ಪುರಸಭಾ ಸದಸ್ಯ ಸೂರ್ಯಕಾಂತ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್, ಕುಮಟಾ ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರು ಶಾನಭಾಗ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಿ. ನಾಯಕ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ಎಚ್. ಬಿ. ನಾಯಕ, ಬಿ. ಆರ್. ಸಿ. ಸಮನ್ವಯಾಧಿಕಾರಿ ರೇಖಾ ನಾಯ್ಕ, ಜಿಲ್ಲೆಯ ಎಲ್ಲ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರು, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.