2,625 total views
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾವಳಿ ಮತ್ತು ಮಹಿಳೆಯರ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪಂದಾವಳಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿಯಲ್ಲಿ ಆಯೋಜಿಸಲಾಗಿತ್ತು .ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಜಿ. ಧನಂಜಯ ರವರು ಅಧ್ಯಕ್ಷತೆಯನ್ನು ವಹಿಸಿದರು . ಮುಖ್ಯ ಅತಿಥಿಗಳಾಗಿ ಕೆ ಇಮ್ತಿಯಾಸ್ ಅಹ್ಮದ್ ಅಂತರಾಷ್ಟ್ರೀಯ ವಾಲಿಬಾಲ್ ಆಟಗಾರರು ದಕ್ಷಿಣ ವಲಯ ರೈಲ್ವೆ ಹುಬ್ಬಳ್ಳಿ ಮತ್ತು ಶ್ರೀ ಶಿವಕುಮಾರ್ ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಹರಿಹರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊಫೆಸರ್ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಪ್ರೊಫೆಸರ್ ಡಿ ಸಿ ಪಾಟೀಲ್ ಸ್ವಾಗತವನ್ನು ಕೋರಿದರು. ಎಂ. ನಾಗರಾಜ ನಾಯ್ಕ ಗ್ರಂಥಪಾಲಕರು ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಹೆಚ್. ವಿ. ಗೀತಾ ನೆರವೇರಿಸಿದರು. ಪ್ರಾಸ್ತವಿಕವಾಗಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಪಿ.ಎಸ್. ಮಾತನಾಡಿದರು ಈ ಪಂದ್ಯಾವಳಿಯಲ್ಲಿ ಸುಮಾರು 35 ತಂಡಗಳು ಭಾಗವಹಿಸಿದರು ಸುಮಾರು 400 ಪುರುಷ ಕ್ರೀಡಾಪಟುಗಳು ಮತ್ತು ಸುಮಾರು 50 ಜನ ಮಹಿಳಾ ಕ್ರೀಡಾಪಟುಗಳು ಈ ಒಂದು ಪಂದ್ಯಾವಳಿಯಲ್ಲಿ ಭಾಗವಹಿಸಿದರು. ದಾವಣಗೆರೆ ವಿಶ್ವವಿದ್ಯಾನಿಲಯ ಅಡಿಯಲ್ಲಿ ಬರುವ ಸುಮಾರು 35 ದೈಹಿಕ ಶಿಕ್ಷಣ ನಿರ್ದೇಶಕರು ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುತ್ತಾರೆ. ಈ ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಅತಿಥಿ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಭಾಗವಹಿಸಿರುತ್ತಾರೆ.
ವರದಿ ಭರ್ಮಪ್ಪ ಮಾಗಳದ