2,594 total views
ಕಲಬುರಗಿ:- ಅಪಸ್ಮಾರ ಅಥವಾ ಮೂರ್ಛೆ ರೋಗವು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಾಗಿದ್ದು, ನಿರಂತರ ತಲೆನೋವು, ಕಣ್ಣುಗಳು ಮಂಜಾಗುವುದು, ಸಂವೇದನಗಳಲ್ಲಿ ಬದಲಾವಣೆ, ತಲೆ ತಿರುಗುವುದು, ವಾಕರಿಕೆ, ಅನಿಯಂತ್ರಿತ ಚಲನವಲನ, ಅತಿಯಾದ ಬೆವರಿಕೆ, ಉಸಿರಾಟದ ತೊಂದರೆ ಅಂತಹ ಲಕ್ಷಣಗಳು ಮೂರ್ಛೆ ರೋಗಕ್ಕೆ ಸಂಬಂಧಿಸಿದೆ. ಆಗ ನಿರ್ಲಕ್ಷ ವಹಿಸದೇ ತಜ್ಷ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಇದರ ಬಗ್ಗೆ ಜಾಗೃತಿ ವಹಿಸಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು.
ನಗರದ ಶೇಖರೋಜಾದಲ್ಲಿರುವ ಶಹಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಶುಕ್ರವಾರ ಹಮ್ಮಿಕೊಂಡಿದ್ದ ‘ಅಂತಾರಾಷ್ಟ್ರೀಯ ಮೂರ್ಛೆರೋಗ ಜಾಗೃತಿ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಪಸ್ಮಾರ ಅಥವಾ ಮೊರ್ಛೆ ಬಂದಾಕ್ಷಣ ರೋಗಿಯ ದೇಹದ ಯಾವುದೇ ಭಾಗಕ್ಕೆ ಅಪಾಯವಾಗದಂತೆ ನೋಡಿಕೊಳ್ಳುವುದು, ಕಲ್ಲು, ನೀರು, ಬೆಂಕಿ ಮುಂತಾದವುಗಳಿಂದ ದೂರವಿರಿಸಬೇಕು. ಉಸಿರಾಟ ಸರಾಗವಾಗುವಂತೆ ನೋಡಿಕೊಳ್ಳುವುದು, ನಾಲಿಗೆ ಕಚ್ಚಿಕೊಳ್ಳದಂತೆ ತಡೆಯವುದು, ವ್ಯಕ್ತಿಯನ್ನು ಸಮತಟ್ಟಾದ ನೆಲದ ಮೇಲೆ ಮಲಗಿಸಬೇಕು, ವ್ಯಕ್ತಿಯ ಸುತ್ತ ಗುಂಪು ಗೂಡದಂತೆ ತಡೆಯಬೇಕು, ವ್ಯಕ್ತಿಯ ಕೈಗೆ ಕೀಲಿ, ರಾಡ್ನ್ನು ನೀಡುವದು ಸೇರಿದಂತೆ ಮುಂತಾದ ಪ್ರಥಮ ಚಿಕಿತ್ಸೆಯ ಕ್ರಮಗಳನ್ನು ನೀಡಬೇಕೆಂದು ಕೆಲವು ಸಲಹೆ-ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸ ಎಚ್.ಬಿ.ಪಾಟೀಲ, ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಪುಷ್ಪಾ ಆರ್.ರತ್ನಹೊನ್ನದ್, ಸಂಗಮ್ಮ ಅತನೂರ, ಗಂಗಾಜ್ಯೋತಿ ಗಂಜಿ, ಗುರುರಾಜ ಕೈನೂರ್, ನಾಗೇಶ್ವರಿ ಮುಗಳಿವಾಡಿ, ರೇಶ್ಮಾ ನಕ್ಕುಂದಿ, ಲಕ್ಷ್ಮಿ ಮೈಲಾರಿ, ಜಗನಾಥ ಗುತ್ತೇದಾರ, ಅರ್ಚನಾ, ಚಂದಮ್ಮ ಮರಾಠಾ ಸೇರಿದಂತೆ ಮತ್ತಿತರರಿದ್ದರು.
ವರದಿ -ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್