2,854 total views
ಕಾರವಾರ ನಗರ ಮಂಡಲದ ಪುನರ್ ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ವನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಸಂತೋಷ್ ನಾಯ್ಕ ನೆರವೇರಿಸದರು.
ರಾಜ್ಯ ಉಪಾಧ್ಯಕ್ಷರು ಮಾತನಾಡಿ
ಪಕ್ಷ ನೀಡುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು.
ಮೂರು ವರ್ಷದ ಈ ಅವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಬಲಿಷ್ಠ ಪಡಿಸಬೇಕು.
ಹಿಂದೆ ಕಾರವಾರದಲ್ಲಿ ಸಂಘಟನೆ ಕಷ್ಟವಾಗಿತ್ತು. ಸಭೆಗಳಿಗೆ ಬೆರಳನಿಕೆಯಷ್ಟು ಜನರು ಇರುತ್ತಿದ್ದರು. ಕ್ರಮೇಣ ಸಂಘಟನೆ ಬೆಳೆಯುತ್ತ ಇಂದು ಬೃಹತ್ತಾಗಿ ಬೆಳೆದಿದೆ.
ಬೂತ್ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಪೇಜ್ ಪ್ರಮುಖರು ತಮ್ಮ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ ಜಾರಿಗೆ ತಂದ ಯೋಜನೆಯನ್ನು ಮನೆ ಮನೆಗೆ ತಲುಪಿಸಬೇಕು. ಇಂದಿನಿಂದಲೆ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು. ನಮ್ಮ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠ ಗೊಳಿಸಬೇಕು. ಸಂಘಟನೆಯ ಬಲ ಪಡಿಸಲು ಶಕ್ತಿ ಮೀರಿ ಶ್ರಮಿಸೋಣ.
ಎಲ್ಲ ಮೋರ್ಚಗಳು ಅತ್ಯಂತ ಮಹತ್ವದ್ದಾಗಿದ್ದು, ಅವುಗಳನ್ನು ಬಲಿಷ್ಟಗೊಳಿಸಲು ಶ್ರಮಿಸಬೇಕು. ಸಂಘಟನೆಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು.
ಈ ಸಂದರ್ಭದಲ್ಲಿ ಕಾರವಾರ ನಗರ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲದ ಶ್ರೀ ಸುಭಾಷ ಗುನಗಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ ,ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾದವರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.