2,803 total views
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಗೋರೆ, ಕುಮಟಾ ಇದರ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನೂರಕ್ಕೆ ನೂರು ದಾಖಲೆಯ ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 93 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 30 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ನಲ್ಲಿ, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಕುಮಾರ ಪ್ರಣವ್ ಎಂ.ಭಟ್ಟ 589 ಅಂಕ (98.16%), ಕುಮಾರಿ ಅಪೂರ್ವ ಜಿ ಭಟ್ಟ 580 (96.16%), ಕುಮಾರ ಸೌರವ್ ಗಾಂವ್ಕರ್ 578(96.33%) ಅಂಕ ಪಡೆಯುವುದರೊಂದಿಗೆ ಮೊದಲ ಮೂರು ಸ್ಥಾನ ಪಡೆದರೆ ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಐದು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 05 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಣವ್ ಎಮ್ ಭಟ್ಟ ಭೌತ ಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ 100ಕ್ಕೆ 100 ಅಂಕ ಪಡೆದರೆ, ಸೌರವ ಗಾಂವಕರ್ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾನೆ. ವಾಣಿಜ್ಯ ವಿಭಾಗದಲ್ಲಿ ಕುಮಾರ ರುತ್ವಿಕ್ ಹೆಬ್ಬಾರ 564(93.83%), ಕುಮಾರಿ ಶ್ರೇಯಾ ಭಟ್ಟ 552(92%), ಕುಮಾರಿ ಸ್ಪೂರ್ತಿ ಹೆಗಡೆ 549(91.5%) ಅಂಕ ಪಡೆಯುವುದರೊಂದಿಗೆ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಜಿ.ಜಿ.ಹೆಗಡೆ, ಪ್ರಾಂಶುಪಾಲರಾದ ಶ್ರೀ ಡಿ. ಎನ್. ಭಟ್ಟ ಸೇರಿದಂತೆ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ