2,685 total views
ಶಿರಸಿಯಲ್ಲಿ ನಡೆದ ಉತ್ತರಕನ್ನಡ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀಮತಿ ರೂಪಾಲಿ ಎಸ್ ನಾಯ್ಕ ಪಾಲ್ಗೊಂಡರು.
ಸಭೆ ಉದ್ದೇಶಿಸಿ ಮಾತನಾಡಿದ ಅವರು ಈ ಬಾರಿ ಮತ್ತೊಮ್ಮೆ ಶ್ರೀ ನರೇಂದ್ರ ಮೋದಿಜೀ ಅವರನ್ನು ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲ ಒಗ್ಗಟ್ಟಿನಿಂದ ಶ್ರಮಿಸೋಣ. ಭಾರತೀಯ ಜನತಾ ಪಕ್ಷ ಅತ್ಯಂತ ದೊಡ್ಡ ಪಕ್ಷವಾಗಿದೆ.ಇದಕ್ಕೆ ಕಾರ್ಯಕರ್ತರ ದೊಡ್ಡ ಶಕ್ತಿ ಇದೆ. ಕಾರ್ಯಕರ್ತರಾದ ನಾವೆಲ್ಲರೂ ಶಕ್ತಿಯಾಗಿ ದೇಶದ ಅಭಿವೃದ್ಧಿಗೆ ನಮ್ಮ ಕೊಡುಗೆಯನ್ನು ನೀಡೋಣ.
ಹಿಂದೆ ಬೇರೆ ದೇಶದವರು ತಯಾರಿಸಿದ ಔಷಧಗಳನ್ನು ಬಳಕೆ ಮಾಡಬೇಕಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ವ್ಯಾಕ್ಸಿನೇಷನ್ ತಯಾರಿಸಿ ಜಗತ್ತಿಗೆ ನೀಡಿದೆ. ಭಾರತ ಇಂದು ವಿಶ್ವ ಗುರುವಾಗಿದೆ.
ಬಾಹ್ಯಾಕಾಶ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಮೂಲಕ ಹೊಸ ಹೊಸ ಆವಿಷ್ಕಾರಕ್ಕೆ ಅನುಕೂಲ ಕಲ್ಪಿಸುತ್ತಿದೆ.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷರಾದ ರಾಜೇಂದ್ರ ನಾಯ್ಕ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ರಾಜ್ಯ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.