2,818 total views
ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಗೋರೆಯ ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಸತತ 2ನೇ ವರ್ಷವೂ ಪ್ರತಿಶತ 100 ರಷ್ಟು ಫಲಿತಾಂಶ ದಾಖಲಾಗಿದೆ. ಕಾಲೇಜಿನ ವಿಜ್ಞಾನ ವಿಭಾಗದಿಂದ ಒಟ್ಟೂ 79 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 61 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟೂ 16 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕುಮಾರ್ ಎಸ್ ಭಟ್ಟ 600 ಕ್ಕೆ 590 ಅಂಕಗಳನ್ನು ಪಡೆದು ರಾಜ್ಯಕ್ಕೆ 9 ನೇ ಬ್ಯಾಂಕ್ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಪೂಜಾ ಅವಧಾನಿ 586 ಅಂಕ ಪಡೆದು ದ್ವಿತೀಯ ಹಾಗೂ ಪ್ರೇರಣಾ ಹಗಡೆ 580 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸಿರಿ ಮಹೇಶ ಹಗಡೆ 579 ಅಂಕ ಪಡೆದು ಪ್ರಥಮ ಸ್ಥಾನ ಪಡದರೆ ಧನ್ಯಾ ಭಟ್ಟ 575 ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಕೌಶಿಕ ಎಮ್ ಭಟ್ಟ 568 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾನೆ. ಗಣಿತ ಶಾಸ್ತ್ರದಲ್ಲಿ 6, ಸಂಸ್ಕೃತದಲ್ಲಿ 4, ಜೀವಶಾಸ್ತ್ರ ಹಾಗೂ ಗಣಕ ವಿಜ್ಞಾನದಲ್ಲಿ 3, ರಸಾಯನಶಾಸ್ತ್ರದಲ್ಲಿ 2 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜಿ.ಜಿ ಹೆಗಡೆಯವರು,ಆಡಳಿತ ಮಂಡಳಿಯವರು,ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.