2,728 total views
ಗಂಗಾವತಿ: ನಗರದ ಪ್ರತಿಷ್ಠಿತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಪ್ರಪ್ರಥಮ ಖಾಸಗಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿರುವ ಶ್ರೀಮತಿ ಹೆಚ್.ಆರ್. ಸರೋಜಮ್ಮ ಬಾಲಕಿಯರ ಪ್ರೌಢಶಾಲೆಯ ೨೦೨೩-೨೪ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-೧ ರ ಫಲಿತಾಂಶದಲ್ಲಿ ಶೇ ೭೧.೫೭ ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ೦೩ ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್, ಪ್ರಥಮ ಶ್ರೇಣಿಯಲ್ಲಿ ೨೩ ವಿದ್ಯಾರ್ಥಿನಿಯರು, ದ್ವಿತೀಯ ಶ್ರೇಣಿಯಲ್ಲಿ ೨೧ ವಿದ್ಯಾರ್ಥಿನಿಯರು ಹಾಗೂ ತೃತೀಯ ಶ್ರೇಣಿಯಲ್ಲಿ ೨೦ ವಿದ್ಯಾರ್ಥಿನಿಯರು ಉತ್ತೀರ್ಣರಾಗಿರುತ್ತಾರೆ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಲಕ್ಷಿö್ಮÃಕಾಂತ್ ಹೇರೂರು ಪ್ರಕಟಣೆಯಲ್ಲಿ ತಿಳಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ-೧ ರಲ್ಲಿ ಮುಸ್ಕಾನ್ ತಂ. ಮಹಮ್ಮದ ರಫಿ ೫೬೨ (೮೯.೯೨) ಅಂಕ,
ಜಿ. ನಿಷಿತಾ ತಂ. ರಾಘವೇಂದ್ರ ೫೫೬ (೮೮.೯೬) ಅಂಕ, ಟಿ. ಪವಿತ್ರಾ ತಂ. ಟಿ. ಶಿವಾನಂದ ೫೩೪ (೮೮.೪೪) ಅಂಕಗಳನ್ನು ಪಡೆಯುವುದರ ಮೂಲಕ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿ ಪ್ರೌಢಶಾಲೆಗೆ ಕೀರ್ತಿ ತಂದಿದ್ದಾರೆ.
ಈ ವಿದ್ಯಾರ್ಥಿನಿಯರಿಗೆ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ
ಡಾ. ಕೊಟ್ಟೂರು ಮಹಾಸ್ವಾಮಿಗಳು ಕಲ್ಮಠ ಹಾಗೂ ಕಾರ್ಯದರ್ಶಿಗಳಾದ ಶ್ರೀ ಶರಣೇಗೌಡ ಮಾಲಿಪಾಟೀಲ್ ಹಾಗೂ ಸಂಘದ ಸರ್ವ ಸದಸ್ಯರು, ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.