2,680 total views
ಕಲಬುರಗಿ:-ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿರುವ ಸೇಡಂ ತಾಲ್ಲೂಕಿನ ದೇವನೂರ ಗ್ರಾಮದ ಅರ್ಜುನಪ್ಪ ಮಡಿವಾಳ ಅವರಿಗೆ ಹಣಕ್ಕೆ ಬೇಡಿಕೆ ಇಟ್ಟು ನಗ್ನಗೊಳಿಸಿ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.ಈ ಪ್ರಕರಣದಲ್ಲಿ ಭಾಗಿಯಾದ 12 ಜನ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ಮನವಿಪತ್ರ ಸಲ್ಲಿಸಿದರು.ಹಿಂದೂ ಜಾಗೃತಿ ಸೇನೆ ಜಿಲ್ಲಾ ಅಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ, ಉಪಾಧ್ಯಕ್ಷ ಸುನೀಲ ಶೀರ್ಕೆ, ಪ್ರಧಾನ ಕಾರ್ಯದರ್ಶಿ ಸಿದ್ದು ಕಂದಗಲ್, ದಶರಥ ಇಂಗಳೆ, ಮಹಾದೇವ ಕೋಟನೂರ, ರಾಜು ಸ್ವಾಮಿ, ರಾಜು ಕಮಲಾಪೂರೆ, ಸಂಗಮೇಶ ಕಾಳಗನೂರ, ಪ್ರಕಾಶ ವಾಘಮೋರೆ, ಈರಣ್ಣ ಸಿ ಹಡಪದ , ಚಿದಾನಂದ ಸ್ವಾಮಿ, ವಿಕಾಸ ಸಗರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ-ಡಾ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್