2,598 total views
ಗಂಗಾವತಿ : ಪ್ರಜ್ವಲ್ ರೇವಣ್ಣ ಪ್ರಕರಣ ಮುಚ್ಚಿಹಾಕಲು ಸರ್ಕಾರಗಳು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದೆ ಎಂದು ಸಿ.ಪಿ.ಐ.ಎಂಎಲ್ ಲಿಬರೇಷನ್ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜ್ವಲ್ ರೇವಣ್ಣ ಸುಮಾರು ಹೆಣ್ಣುಮಕ್ಕಳ ಮಾನ ಮರ್ಯಾದೆ ತೆಗೆದು ಲೈಂಗಿಕ ದೌರ್ಜನ್ಯ ಮಾಡುವುದರ ಜೊತೆಗೆ ಹೆಣ್ಣುಮಕ್ಕಳನ್ನು ಶೋಷಣೆಗೆ ಒಳಪಡಿಸಿರುವುದು ಹೇಯ ಕೃತ್ಯವಾಗಿದೆ. ಈಗಿನ ಸರ್ಕಾರಗಳು ಪ್ರಜ್ವಲ್ರ ವಿರುದ್ಧ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿದ್ದು, ಪ್ರಕರಣವನ್ನು ಮುಚ್ಚಿಹಾಕಲು ಹುನ್ನಾರ ನಡೆಸಿದ್ದಾರೆ. ಸಾವಿರಾರು ಮಹಿಳೆಯರು ಪ್ರಜ್ವಲ್ ರೇವಣ್ಣ ಮಾಡಿದ ವಿಡಿಯೋ ಚಿತ್ರೀಕರಣದಲ್ಲಿ ಇದ್ದ ಕಾರಣ ಆ ಎಲ್ಲಾ ಮಹಿಳೆಯರ ಮರ್ಯಾದೆ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ.
ಈ ವಿಷಯವನ್ನು ಮುಂದಿಟ್ಟುಕೊAಡು ಮೇ-೩೦ ರಂದು ಹಾಸನದಲ್ಲಿ ಪ್ರಗತಿಪರರೆಲ್ಲರೂ ಸಭೆ ಸೇರಲಿದ್ದಾರೆ. ಈ ಸಭೆಯಲ್ಲಿ ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷ ಪಾಲ್ಗೊಳ್ಳಲಿದೆ. ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಹಾಸನದ ಸಭೆಯಲ್ಲಿ ಪಾಲ್ಗೊಳ್ಳಲು ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.