2,493 total views
ಶಿಡ್ಲಘಟ್ಟ..
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಬೆಂಗಳೂರಿನಲ್ಲಿ ನಡೆದಿದ್ದು ಪ್ರಥಮ ಪ್ರಾಶಸ್ತ್ರದ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮುನ್ನಡೆಯನ್ನು ಕಾಯ್ದುಕೊಂಡಿದ್ದು ಜಿಲ್ಲೆಯಲ್ಲಿ ಅಭಿಮಾನಿಗಳಲ್ಲಿ ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆಮಾಡುವಂತೆ ಮಾಡಿತು.ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಬೆಂಗಳೂರಿನ ಕಲಾ ಮತ್ತು ವಿಜ್ಞಾನ ಕಾಲೇಜಿನ ಆವರಣದಲ್ಲಿ ನಡೆದ ಪರಿಷತ್ ಮತ ಎಣಿಕೆಯಲ್ಲಿ ಪ್ರಥಮ ಪ್ರಾಶಸಸ್ಯದ ಮತಗಳು ಕಾಂಗ್ರೆಸ್ ಅಭ್ಯರ್ಥಿ ಡಿ ಟಿ ಶ್ರೀನಿವಾಸ್ ಅವರು 8871 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ 7113 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 6863 ಮತಗಳನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ.ಆದರೆ, ಎರಡನೇ ಪ್ರಾಶಸ್ತ್ರದ ಮತಗಳ ಎಣಿಕೆ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಟಿ ಶ್ರೀನಿವಾಸ್ ಸುಮಾರು 3000ಕ್ಕೂ ಹೆಚ್ಚು ಮತಗಳನ್ನು ಪಡೆದಿರುವ ಮುಖಾಂತರ ಆಗ್ನೇಯ ಶಿಕ್ಷಣ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶದಲ್ಲಿ ಜಯಗಳಿಸಿದ್ದಾರೆ
ಪ್ರಥಮ ಪ್ರಾಶಸ್ತ್ಯದಲ್ಲಿ 8909 ಮತ, ವೈ ಎ ನಾರಾಯಣಸ್ವಾಮಿ 6942 ಮತ, ವಿನೋದ್ ಶಿವರಾಜ್ 6888 ಮತಗಳನ್ನೂ ಪಡೆದಿದ್ದು ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ 3000 ಕ್ಕೂ ಅಧಿಕ ಮತಗಳಿಂದ ಡಿ ಟಿ ಶ್ರೀನಿವಾಸ್ ರವರು ಜಯಗಳಿಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಅವರು ಜಯಗಳಿಸಿರುವುದನ್ನು ಕಂಡು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಸಂತೋಷದಲ್ಲಿ ತೇಲುತ್ತಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಡಿ ಟಿ ಶ್ರೀನಿವಾಸ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.ಇದೇ ಸಂದರ್ಭದಲ್ಲಿ ನನ್ನ ಗೆಲುವಿಗಾಗಿ ಶ್ರಮಿಸಿದ ಐದು ಜಿಲ್ಲೆಗಳ ಕಾಂಗ್ರೆಸ್ ಪಕ್ಷದ ಶಾಸಕರುಗಳಿಗೆ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಹಾಗೂ ಎಲ್ಲಾ ಘಟಕದ ಅಧ್ಯಕರುಗಳಿಗೆ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕಿಯರ ಮತದಾರ ಬಾಂಧವರಿಗೆ ಹಾಗೂ ಎಲ್ಲಾ ಕಾರ್ಯಕರ್ತ ಬಂಧುಗಳಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ನೂತನ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.