3,700 total views
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಜಿಗಜೇವಣಿ ಗ್ರಾಮದ ಶ್ರೀ ಸಿದ್ದೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ ನಡೆಸಲಾಗಿದ್ದು ಹಾಗೂ ಮುರಾರ್ಜಿ ದೇಸಾಯಿ ಮತ್ತು ಆದರ್ಶ ವಿದ್ಯಾಲಯ ಹಾಗೂ ಪ್ರತಿಷ್ಠಿತ ವಸತಿ ಶಾಲೆ ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾದಂತಹ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಸತಿ ಶಾಲೆಗೆ ಒಬ್ಬಳು ವಿದ್ಯಾರ್ಥಿ ಸೇರಿದಂತೆ ಒಟ್ಟು 11 ವಿದ್ಯಾರ್ಥಿಗಳು ವಿವಿಧ ವಸತಿ ಶಾಲೆಗೆ ಆಯ್ಕೆಯಾಗಿರುತ್ತಾರೆ. ಎಲ್ಲಾ ಆಯ್ಕೆಯಾದ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ನಡೆದ ಪಾಲಕರ ಸಭೆಯಲ್ಲಿ ಶಾಲುಹೋದಿಸಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಪಾಲಕ್ ಬಂಧುಗಳು ಹಾಗೂ ಊರಿನ ಗುರುಹಿರಿಯರು ಉಪಸ್ಥಿತರಿದ್ದರು. ಮುಖ್ಯ ಗುರುಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದರು.