2,519 total views
ಕುಮಟಾ: ಮಿರ್ಜಾನ್ ಗ್ರಾಪಂ ವ್ಯಾಪ್ತಿಯ ರಾಮನಗರದ ತಗ್ಗು ಪ್ರದೇಶಗಳಲ್ಲಿ ಮಳೆನೀರು ಮನೆಗಳಿಗೆ ನುಗ್ಗುತ್ತಿದ್ದು, ಕಂಪೌಂಡ್ ಗೋಡೆಗಳಿಗೆ ಹಾನಿಯಾಗಿದೆ.ಇದರಿಂದ ಅಲ್ಲಿಯ ನಿವಾಸಿಗಳಿಗೆ ತೊಂದರೆ ಅನುಭವಿಸುವಂತಾಗಿದೆ.ಇಲ್ಲಿ ಸುಮಾರು ಹತ್ತಾರು ಮನೆಗಳಿದ್ದು ಇದೆ ಪರಿಸ್ಥಿತಿ ನಿರ್ಮಾಣಗೊಂಡಿದೆ. ತಕ್ಷಣ ಶಾಸಕರು ಆಗಮಿಸಿ ನಮ್ಮ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಲ್ಲಿಯ ನಿವಾಸಿಗಳು ಒತ್ತಾಯಿಸಿದ್ದಾರೆ.