2,407 total views
ಕಲಬುರಗ:- ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಾಗೂ ನ್ಯಾಯವಾದಿ ಹಣಮಂತ ಯಳಸಂಗಿ ಸೇರಿ 6 ಜನ ಆರೋಪಿಗಳನ್ನು ಸೆನ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸೇರಿ ಶ್ರೀಕಾಂತ ರೆಡ್ಡಿ, ಮಂಜುನಾಥ ಭಂಡಾರಿ, ಉದಯಕುಮಾರ ಖಣಗೆ, ಅರವಿಂದ ಕಮಲಾಪೂರ, ಸಂತೋಷ ಪಾಳಾನನ್ನು ಬಂಧಿಸಿ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಲೇಂಗಟಿ ಮತ್ತು ಪ್ರಭು ಹಿರೇಮಠ ಎಂಬುವವರನ್ನು ಎರಡ್ಮೂರು ದಿನಗಳ ಹಿಂದೆಯೇ ಬಂಧಿಸಲಾಗಿತ್ತು.ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ,ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಅವರ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿ ಬಳಿಕ ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಳ್ಳುತ್ತಿದ್ದರು. ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ತಾವು ಟಾರ್ಗೆಟ್ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ ರೆಕಾರ್ಡ್ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ.