2,197 total views
ಜೇವರ್ಗಿ ತಾಲೂಕಿನ ಗ್ರಾಮ ಪಂಚಾಯತಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗ್ರೇಡ್ 1 ಗ್ರೇಡ್ 2 ಪಂಚಾಯತ್ ಕಾರ್ಯದರ್ಶಿಗಳನ್ನು ಪ್ರಭಾರಿ ಪಿಡಿಒಗಳನ್ನಾಗಿ ನೇಮಕ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ರಾಜ್ಯ ಸಹಕಾರದರ್ಶಿಗಳಾದ ಮಲ್ಲಿಕಾರ್ಜುನ್ ನಾಯ್ಕೋಡಿ ಗ್ರಾಮೀಣ ಅಭಿವೃದ್ಧಿ ಉಸ್ತುವಾರಿ ಸಚಿವರಾಧ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ ಜೇವರ್ಗಿ ತಾಲೂಕಿನಲ್ಲಿ ಒಟ್ಟು 25 ಗ್ರಾಮ ಪಂಚಾಯತಿಗಳಿದ್ದು ಕೇವಲ 9 ಜನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಈ ವ್ಯಾಪ್ತಿಯಲ್ಲಿ ಪ್ರತಿಯೊಬ್ಬ ಪೀಡಿಓ ನಾಲ್ಕರಿಂದ 5ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರಣ ಇದರಿಂದ ಪಂಚಾಯತಿಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಹೇಳಿಕೊಳ್ಳುವಂತಹ ಕೆಲ್ಸಗಳು ಆಗಿರುವುದಿಲ್ಲ ಇದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ . ಕಾರಣ ಆಯಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗೈಡ್ 1 ಮತ್ತು ಗ್ರೇಡ್-2 ಕಾರ್ಯದರ್ಶಿಗಳನ್ನು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಸುಮಾರು 10 ರಿಂದ 12 ವರ್ಷ ಕರ್ತವ್ಯ ನಿರ್ವಹಿಸಿರುತ್ತಾರೆ ಇವರಿಗೆ ಆಡಳಿತದ ಅನುಭವಿಸುತ್ತದೆ ಆದಕಾರಣ ಇವರಿಗೆ ಪ್ರಬಾರಿ ಪಿಡಿಓ ಅವರನ್ನಾಗಿ ನೇಮಕ ಮಾಡಲು ಕೂಡಲೇ ಸರ್ಕಾರದ ವತಿಯಿಂದ ಆದೇಶ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿಯಾದ ಡಾ. ಮಲ್ಲಿಕಾರ್ಜುನ್ ನಾಯ್ಕೋಡಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಿದವೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ ಜಟ್ಟಪ್ಪ ಎಸ್ ಪೂಜಾರಿ