2,278 total views
ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ 13ನೇ ವರ್ಷದ ವಾರ್ಷಿಕೋತ್ಸವ ಸಂದರ್ಭದಲ್ಲಿ ಮಹಿಳಾ ಸಾಧಕೀಯರಿಗೆ ‘ಶ್ರೀಮತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿ’ಯನ್ನು ಹಾಸನ ನಗರದ ಬಹುಮುಖ ಪ್ರತಿಭೆ ಯಾದ ಸಾಹಿತಿ,ಶಿಕ್ಷಕಿ, ಸಮಾಜ ಸೇವಕಿ, ಸಂಸ್ಥಾಪಕ ಅಧ್ಯಕ್ಷರು ‘ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ’.ಜಿಲ್ಲೆ ,ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸೆಮಿನಾರ್ ಗಳಲ್ಲಿ ಭಾಗವಹಿಸಿದ್ದು, ಹಾಗೂ ಪ್ರಶಸ್ತಿಯನ್ನು ಪಡೆದು ಗುರುತಿಸಿಕೊಂಡಿರುವ ಹಾಗೂ ಇತ್ತೀಚೆಗೆ 2024ನೇ ಯ ಸಾಲಿನ ಸ್ವತಂತ್ರೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತದಿಂದ ಪಡೆದಿರುವ ಶ್ರೀಮತಿ ಹೆಚ್.ಎಸ್.ಪ್ರತಿಮಾ ಹಾಸನ್ ರವರನ್ನು ಇವರ ಸಾಹಿತ್ಯ,ಸಾಮಾಜಿಕ,ಸಾಂಸ್ಕೃತಿಕ,ಶೈಕ್ಷಣಿಕ ಕ್ಷೇತ್ರಗಳ ಸೇವೆಯನ್ನು ಕಂಡು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷರು ಶ್ರೀಮತಿ ಹೆಚ್.ಎಲ್. ಯಮುನಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯನ್ನು ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗ ಮಂದಿರದಲ್ಲಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಮಾಡಿ ಪ್ರಶಸ್ತಿಯನ್ನು ಶ್ರೀಮತಿ ಹೆಚ್. ಎಸ್. ಪ್ರತಿಮಾ ಹಾಸನ್ ರವರು ಪಡೆದು ಕಾರ್ಯಕ್ರಮದ ಯಶಸ್ವಿ ಯಾಗಲು ಕಾರಣರಾದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಜೆಡಿಎಸ್ ಮುಖಂಡ ಎಚ್ ಕೆ ರಾಮು ರವರು,ಕ ಸಾ ಪ ದ ಜಿಲ್ಲಾಧ್ಯಕ್ಷರು ಮಡ್ಡಿಕೆರೆ ಗೋಪಾಲ್, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ರಾಜ್ಯಾಧ್ಯಕ್ಷೆ ಹೆಚ್.ಎಲ್. ಯಮುನಾ ರವರು, ಗೌಡತಿಯರ ಸೇನೆ ರಾಜ್ಯಾಧ್ಯಕ್ಷೆ ರೇಣುಕಾ ರವರು ಇನ್ನೂ ಹಲವರು ಉಪಸ್ಥಿತರಿದ್ದರು.